ಕುಣಿಗಲ್ : ಗ್ರಾಪಂ ಚುನಾವಣೆ ; ಮತದಾನಕ್ಕೆ ಸಜ್ಜು

 ಕುಣಿಗಲ್ : 

      ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ಚುನಾವಣೆಯನ್ನು ನಡೆಸಲು ಒಟ್ಟಾರೆ 2000 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ತಹಸಿಲ್ದಾರ್ ಹಾಗೂ ಚುನಾವಣಾಧಿಕಾರಿಯೂ ಆದ ವಿ.ಆರ್.ವಿಶ್ವನಾಥ್ ತಿಳಿಸಿದರು.

     ತಾಲೂಕಿನ 36 ಗ್ರಾಮ ಪಂಚಾಯಿತಿಯ ಮೊದಲನೇ ಹಂತದ ಚುನಾವಣೆ ತೆರಳುವ ಸಿಬ್ಬಂದಿಗಳಿಗೆ ಬೂತ್‍ಗಳನ್ನು ಹಾಗೂ ಬ್ಯಾಲೆಟ್ ಪೇಪರ್ ಇತರೇ ಸಲಕರಣೆಗಳನ್ನು ವಿತರಿಸಿ ತಾಲೂಕಿನಲ್ಲಿ 36 ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಡೆಯಲಿದ್ದು ಇದಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. 258 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು 496 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗಿದ್ದು ಒಟ್ಟು 165 884 ಮತದಾರರಿದ್ದು ಇದರಲ್ಲಿ 84122 ಪುರುಷ ಮತದಾರರಿದ್ದು 81754 ಮಹಿಳೆಯ ತಮ್ಮ ಹಕ್ಕು ಚಲಾಯಿಸುವ ಮೂಲಕ ಗ್ರಾಮ ಪಂಚಾಯಿತಿಗೆ ಸದಸ್ಯರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ ಎಂದರು.

      ತಾಲೂಕು ಆಡಳಿತ ಚುನಾವಣೆಗೆ ಎಲ್ಲ ಸಿದ್ಧತೆಯನ್ನು ಕೈಗೊಂಡು ಮತಗಟ್ಟೆಗೆ ತಲುಪಲು ಈಗಾಗಲೇ ಎಲ್ಲಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಸುಮಾರು 2000 ಸಿಬ್ಬಂದಿಯು ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ ಪೊಲೀಸ್ ಇಲಾಖೆಯ 510 ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಶಿಕ್ಷಕರು ಸೇರಿದಂತೆ ಚುನಾವಣೆಯ ಕಾರ್ಯದಲ್ಲಿ ಭಾಗಿಯಾಗಿದ್ದಾರೆ ಇವರೆಲ್ಲರಿಗೂ ಮತಗಟ್ಟೆಗಳು ತೆರಳಲು ಕಾರ್ಯದಲ್ಲಿ ಸಿಬ್ಬಂದಿ ಪೊಲೀಸ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಎಲ್ಲಾ ಸಿದ್ಧತೆ ಕೈಗೊಂಡು ಮತ ಕೇಂದ್ರಗಳಿಗೆ ತೆರಳುವ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪುರಸಭೆಯ ಪರಿಸರ ಇಂಜಿನಿಯರ್ ಚಂದ್ರಶೇಖರ್ ಸೇರಿದಂತೆ ಹಲವಾರು ಅಧಿಕಾರಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link