ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಸ್ವಾಪಿಂಗ್ ಘಟಕಕ್ಕೆ ಸಿಎಂ ಚಾಲನೆ

 ಬೆಂಗಳೂರು : 

      ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸನ್ ಮೊಬಿಲಿಟೀಸ್ ಕಂಪೆನಿಯ ವಿದ್ಯುತ್ ವಾಹನಗಳ ಬ್ಯಾಟರಿ ಸ್ವಾಪಿಂಗ್ ಘಟಕಗಳಿಗೆ ಚಾಲನೆ ನೀಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ನಾಗರಿಕರು ವಿದ್ಯುತ್ ಚಾಲಿತ ವಾಹನಗಳನ್ನು ಬಳಸಲು ಉತ್ಸುಕರಾಗಿದ್ದಾರೆ. ಆದರೆ ಇದಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸನ್ ಮೊಬಿಲಿಟಿಯವರು ರೂಪಿಸಿರುವ ಬ್ಯಾಟರಿ ಸ್ವಾಪಿಂಗ್ ನೆಟ್ ವರ್ಕ್ ಒಂದು ಮಹತ್ವಪೂರ್ಣ ಬೆಳವಣಿಗೆ ಎಂದು ಶ್ಲಾಘಿಸಿದರು.

      ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಸರ್ಕಾರ ಒತ್ತು ನೀಡಲಿದ್ದು, ಬ್ಯಾಟರಿ ಸ್ವಾಪಿಂಗ್ ಘಟಕಗಳು ವೆಚ್ಚ ಹಾಗೂ ಸಮಯದ ಉಳಿತಾಯ ಮಾಡಲಿವೆ ಎಂದು ಅಭಿಪ್ರಾಯಪಟ್ಟರು.

      ಈ ಸಂದರ್ಭದಲ್ಲಿ ಮಾತನಾಡಿದ ಸನ್ ಮೊಬಿಲಿಟಿಯ ಉಪಾಧ್ಯಕ್ಷರಾದ ಉದಯ್ ಖೇಮ್ಕಾ ಹಾಗೂ ಚೇತನ್ ಮೈನಿ ಅವರು ಭಾರತದ ಮೊದಲ ವಿದ್ಯುತ್ ಚಾಲಿತ ಕಾರ್ ತಯಾರಿಕೆಗೆ ಕರ್ನಾಟಕ ಸರ್ಕಾರ ನೀಡಿದ ಬೆಂಬಲವನ್ನು ಸ್ಮರಿಸಿ, ಈ ಹಸಿರು ಉಪಕ್ರಮಕ್ಕೂ ಸರ್ಕಾರ ಬೆಂಬಲ ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

     ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಸನ್ ಮೊಬಿಲಿಟಿ ಸಂಸ್ಥೆಯ ಸಿಇಓ ಡಿ.ಎಸ್. ರಾವತ್, ಪಿಯಾಜಿಯೊ ವೆಹಿಕಲ್ಸ್ ನ ಸಿಇಓ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿಯಾಗೊ ಗ್ರಾಫಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link