ಬೆಂಗಳೂರು :
ರಾಜ್ಯಾದ್ಯಂತ ಹೇರಿದ್ದ ರಾತ್ರಿ ಕರ್ಫ್ಯೂವನ್ನು ಜಾರಿಯಾಗುವ ಮೊದಲೇ ರಾಜ್ಯ ಸರ್ಕಾರ ದಿಢೀರ್ ಆಗಿ ವಾಪಸ್ ಪಡೆದಿದೆ.
ಈ ಕುರಿತಂತೆ ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನೈಟ್ ಕರ್ಪ್ಯೂ ಅಗತ್ಯವಿಲ್ಲ ಎನ್ನುವ ಕಾರಣದಿಂದಾಗಿ ಇಂದು ರಾತ್ರಿಯಿಂದ ಜಾರಿಗೆ ಬರಲಿದ್ದಂತ ನೈಟ್ ಕರ್ಪ್ಯೂ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಇಂದು ರಾತ್ರಿಯಿಂದ ಕೊರೋನಾ ಸೋಂಕಿನ ಭೀತಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಸಿತ್ತು. ಡಿಸೆಂಬರ್ 24ರ ರಾತ್ರಿ 11ಗಂಟೆಯಿಂದ ಬೆಳಗ್ಗೆ 5ಗಂಟೆವರೆಗೆ 9 ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಬುಧವಾರ(ಡಿಸೆಂಬರ್ 23) ಆದೇಶ ಹೊರಡಿಸಿತ್ತು. ಆದರೆ ರಾತ್ರಿ ಕರ್ಫ್ಯೂಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವಾಪಸ್ ಪಡೆದಿದೆ ಎಂದು ವರದಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ