ಹೊಸಪೇಟೆ :
ಮದ್ಯ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ನಡೆದಿದೆ.
ರಘು ಮೃತಪಟ್ಟವರು. ಶಾಮನೂರು ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಜಾನ್ ಡಿಸ್ಟಿಲರೀಸ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಯೂನಿಟ್ ಸ್ಯಾಂಸನ್ ಡಿಸ್ಟಿಲರೀಸ್ ಘಟಕಗಳಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ಒಳಗಡೆ ಅನೇಕ ಮಂದಿ ಕೆಲಸ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಗೋಡೆಗಳು ಕುಸಿಯುತ್ತಿವೆ. ಆಲ್ಕೋಹಾಲ್ ಟ್ಯಾಂಕ್ ವೆಲ್ಡಿಂಗ್ ಮಾಡುವಾಗ ಬೆಂಕಿ ಅವಘಡ ಸಂಭವಿಸಿದೆ. ಮದ್ಯ ತಯಾರಿಕಾ ಘಟಕವಾಗಿದ್ದರಿಂದ ಸಾಕಷ್ಟು ಪ್ರಮಾಣದ ಮದ್ಯದ ಬಾಟೆಲ್‌ಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿತ್ತು. ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹಲವಾಗಿಲು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ