ಮಧುಗಿರಿ : ಪಟ್ಟಣದ ಕಂದಾಯ ಕ್ರೂಢೀಕರಣಕ್ಕೆ ಆದ್ಯತೆ

 ಮಧುಗಿರಿ : 

      ಪಟ್ಟಣದಲ್ಲಿ ಕಂದಾಯ ಕ್ರೂಡೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪುರಸಭಾ ಅಧ್ಯಕ್ಷ ತಿಮ್ಮರಾಜು ತಿಳಿಸಿದರು.
ಪಟ್ಟಣದ ಪುರಸಭಾ ಆವರಣದಲ್ಲಿ ಮೊದಲ ಸಾಮಾನ್ಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಅಂಗಡಿ ಮಳಿಗೆಗಳಿಗೂ ಟ್ರೇಡ್ ಲೈಸನ್ಸ್ ಗಳನ್ನು ನೀಡಲು ಕ್ರಮಕೈಗೊಳ್ಳಲಾಗಿದೆ. ಪುರಸಭೆಗೆ ಹೆಚ್ಚಿನ ಆದಾಯ ಬರಲು ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದ್ದು, ಇದರ ಮೂಲಕ ಪಟ್ಟಣದ ಅಭಿವೃದ್ದಿಗೆ ಒತ್ತು ನೀಡಲಾಗುವುದು ಎಂದರು.

      ಪಟ್ಟಣದಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 16ನೇ ವಾರ್ಡಿನಲ್ಲಿ ಶನಿಮಹಾತ್ಮ ದೇವಸ್ಥಾನಕ್ಕೆ ಹೋಗಲು ರಸ್ತೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಖಾಲಿ ನಿವೇಶನಗಳಲ್ಲಿ ಬೆಳದಿರುವ ಗಿಡಗಂಟೆಗಳನ್ನು ತೆಗೆಸಲು ಕ್ರಮ ಕೈಗೊಳ್ಳಲಾಗಿದ್ದು ಖರ್ಚುವೆಚ್ಚಗಳನ್ನು ನಿವೇಶನ ಮಾಲೀಕರಿಂದ ವಸೂಲಿ ಮಾಡಲಾಗುವುದು. ಒಟ್ಟಾರೆ ಪಟ್ಟಣದ ಅಭಿವೃದ್ದಿಗೆ ಹೆಚ್ಚಿನ ಒತ್ತನ್ನು ನೀಡಲಾಗುವುದು ಎಂದರು.

      ಒಳಚರಂಡಿ ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಜ.16 ರಂದು ಗುತ್ತಿಗೆದಾರರೊಂದಿಗೆ ಈ ಸಂಬಂಧ ಚರ್ಚಿಸಿ ಸಮಸ್ಯೆಯನ್ನು ಪರಿಹರಿಸಲಾಗುವುದು. ವಿದ್ಯಾನಗರ ಸೇರಿದಂತೆ ಹಲವು ಕಡೆ ಬೀದಿ ದೀಪ ಹಾಗೂ ಹೈಮಾಸ್ಕ್ ಸಮಸ್ಯೆಗಳು ಎದುರಾಗಿದ್ದು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.

      ಮುಖ್ಯಾಧಿಕಾರಿ ಅಮರ ನಾರಾಯಣ, ಉಪಾಧ್ಯಕ್ಷೆ ರಾಧಿಕಾ ಆನಂದ್, ಸದಸ್ಯರಾದ ಎಂ.ವಿ.ಗೋವಿಂದರಾಜು, ಎಂ.ಆರ್.ಜಗನ್ನಾಥ್, ಚಂದ್ರಶೇಖರ್‍ಬಾಬು, ಎಂ.ಎಸ್.ಚಂದ್ರಶೇಖರ್, ನರಸಿಂಹಮೂರ್ತಿ, ಲಾಲಾಪೇಟೆ ಮಂಜುನಾಥ್, ಮಂಜುನಾಥ್ ಆಚಾರ್, ನಟರಾಜು, ಮುಖಂಡರಾದ ಸಾಧಿಕ್, ಎಸ್.ಬಿ.ಟಿ ರಾಮು ಹಾಗೂ ಮುಂತಾದವರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link