ಚಿಕ್ಕನಾಯಕನಹಳ್ಳಿ :
ತಾಲ್ಲೂಕಿನ ಕುಪ್ಪೂರು ಗ್ರಾಮದಲ್ಲಿ ಚರಂಡಿ ನೀರು ಹರಿಯದೆ ನಿಂತಲ್ಲೇ ನಿಂತು ಕೊಳಚೆ ನಿರ್ಮಾಣವಾಗುತ್ತಾ ಸಾಂಕ್ರಾಮಿಕ ರೋಗದ ವಾತಾವರಣ ಸೃಷ್ಠಿಯಾಗುತ್ತಿದೆ.
ಕುಪ್ಪೂರು ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಹಾಗೂ ವೀರಭದ್ರೇಶ್ವರ ದೇವಸ್ಥಾನದ ಮುಂದೆ ಚರಂಡಿ ನೀರು ನಿಂತಲ್ಲೇ ನಿಂತುಕೊಂಡು ಗಬ್ಬುವಾಸನೆ ಬೀರುತ್ತಿದೆ, ಸಾರ್ವಜನಿಕರಿಗೆ ಈ ವಾಸನೆಯಿಂದ ಓಡಾಡಲು ತೊಂದರೆ ಪಡುತ್ತಿದ್ದಾರೆ.
ಚರಂಡಿ ನೀರಿನಿಂದ ಸೊಳ್ಳೆಗಳು ಉತ್ಪಾದನೆಯಾಗಿ ಸಾಂಕ್ರಾಮಿಕ ರೋಗದ ಭೀತಿ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಲವು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆ ಭಾಗದ ಗ್ರಾಮಸ್ಥರು ದೂರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ