ಬೆಂಗಳೂರು:
ಮಾದಕ ಜಾಲ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಆದಿತ್ಯ ಆಳ್ವನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಮಾದಕ ಜಾಲದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ನಾಪತ್ತೆಯಾಗಿದ್ದರು.
ಈ ಕುರಿತು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಪ್ರತಿಕ್ರಿಯಿಸಿ, ಸೋಮವಾರ ರಾತ್ರಿ ಆದಿತ್ಯ ಆಳ್ವಾರನ್ನು ಚೆನ್ನೈನಲ್ಲಿ ಇನ್ಸ್ಪೆಕ್ಟರ್ ಪುನೀತ್ ಹಾಗೂ ಸಿಬ್ಬಂದಿ ತಿಮ್ಮೆಗೌಡ ಆದಿತ್ಯ ಆಳ್ವಾನನ್ನು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತೆ ವಶಕ್ಕೆ ಪಡೆಯುತ್ತೇವೆ. ಹಲವು ಪಾರ್ಟಿಗಳಲ್ಲಿ ಆದಿತ್ಯ ಆಳ್ವಾ ಭಾಗವಹಿಸುತ್ತಿದ್ದರು. ಅಲ್ಲದೇ ಅವರ ಮನೆ ಹೌಸ್ ಆಫ್ ಲೈಫ್ ನಲ್ಲಿ ಪಾರ್ಟಿ ನಡೆಯುತ್ತಿತ್ತು. ಅಲ್ಲೂ ಕೂಡ ದಾಳಿ ನಡೆಸಿ ಶೋಧ ಕಾರ್ಯ ನಡೆಸಿರುವುದಾಗಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗೆ ಮಾದಕ ವಸ್ತು ಪೂರೈಕೆಯಲ್ಲಿ ಆದಿತ್ಯ ಆಳ್ವ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ