ಸಂಪುಟ ವಿಸ್ತರಣೆ : 7 ಮಂದಿಗೆ ಒಲಿದ ಸಚಿವ ಸ್ಥಾನ!!

ಬೆಂಗಳೂರು :  

     ಸಚಿವ ಸಂಪುಟಕ್ಕೆ ಹೊಸದಾಗಿ ಯಾರು ಸೇರಿಕೊಳ್ಳುತ್ತಾರೆ ಎಂಬ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದ್ದು, ಏಳು ಮಂದಿ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

      7 ಸಚಿವರ ಹೆಸರಿರುವ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಅದರಲ್ಲಿ ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೇಶ್ವರ್ ಹಾಗೂ ಅರವಿಂದ ಲಿಂಬಾವಳಿಗೆ ಸ್ಥಾನ ನೀಡಲಾಗಿದೆ. ಈಗಾಗಲೇ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದು, ಸಂಜೆ 3.50ಕ್ಕೆ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

     ಸದ್ಯ ಖಾಲಿಯಿರುವ 7 ಸ್ಥಾನದ ಜೊತೆಗೆ ಒಬ್ಬ ಸಚಿವರನ್ನು ಸಂಪುಟದಿಂದ ತೆಗೆಯಲು ನಿರ್ಧರಿಸಲಾಗಿದೆ. ಹೀಗಾಗಿ ಅಬಕಾರಿ‌ ಸಚಿವ ಹೆಚ್.ನಾಗೇಶ್‌ರನ್ನು‌ ಸಂಪುಟದಿಂದ ಕೈ ಬಿಡಲು ಸಿಎಂ ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.  ನಾಳೆಯೊಳಗಾಗಿ ರಾಜೀನಾಮೆ ಪತ್ರ ನೀಡುವಂತೆ ನಾಗೇಶ್​​ಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

     ನಾಗೇಶ್‌ರನ್ನು ಕೈಬಿಟ್ಟರೆ, 7+1 = 8 ಸ್ಥಾನಗಳು ಖಾಲಿಯಿರುತ್ತದೆ. ಈ 8 ಸ್ಥಾನಗಳ ಪೈಕಿ 7 ಸ್ಥಾನಗಳನ್ನು ಭರ್ತಿ ಮಾಡಿ ಒಂದನ್ನು ಮಾತ್ರ ಖಾಲಿಯಿಟ್ಟುಕೊಳ್ಳುವ ನಿರ್ಧಾರಕ್ಕೆ ನಾಯಕರು ಬಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link