ಮಂಗಳೂರು:
ಒಳ ಉಡುಪಿನಲ್ಲಿ ಅಕ್ರಮವಾಗಿ 1.09 ಕೋಟಿ ರೂ. ಮೌಲ್ಯದ 2.15 ಕೆ.ಜಿ ತೂಕದ ಚಿನ್ನದ ಗಟ್ಟಿಯನ್ನು ಸಾಗಿಸುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಕಾಸರಗೋಡಿನ ಫೈಜಲ್ ತೊಟ್ಟಿ ಮೆಲ್ಪರಂಬ (37) ಹಾಗೂ ಮೊಹಮ್ಮದ್ ಶೋಹೈಬ್ ಮುಗು (31) ಬಂಧಿತ ಆರೋಪಿಗಳು.
ಶಾರ್ಜಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಇವರಿಬ್ಬರನ್ನು ಸಂಶಯದ ಮೇಲೆ ತಪಾಸಣೆಗೆ ಒಳಪಡಿಸಲಾಗಿತ್ತು. ಒಳಚಡ್ಡಿಯ ಜೇಬಿನಲ್ಲಿ ಚಿನ್ನ ಪತ್ತೆಯಾಗಿದ್ದು, ತಪಾಸಣೆ ಮಾಡುವ ವೇಳೆಗೆ ಸುಮಾರು 1.09 ಕೋಟಿ ರೂಪಾಯಿ ಮೌಲ್ಯದ 2.15 ಕೆಜಿ ಚಿನ್ನ ಇರುವುದು ತಿಳಿದುಬಂದಿದೆ. ಸದ್ಯ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
