ಬೆಂಗಳೂರು :
ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಧೃವ ನಾರಾಯಣ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಗೆ ಇವರುಗಳನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ದೆಹಲಿ ಕಾಂಗ್ರೆಸ್ ಮುಖ್ಯ ಘಟಕ ಆದೇಶಿಸಿದೆ.
INC COMMUNIQUE
Important Notification regarding appointment of two Working Presidents for Karnataka Pradesh Congress Committee pic.twitter.com/xvIiayHFFx
— INC Sandesh (@INCSandesh) January 20, 2021
ಈ ಕುರಿತಂತೆ ಎಐಸಿಸಿಯ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಧೃವ ನಾರಾಯಣ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ