ರಾಜ್ಯದ 4.36 ಕೋಟಿ ಜನರಿಗೆ ಆಹಾರ ಧಾನ್ಯ ವಿತರಣೆ : ಸಚಿವ ಉಮೇಶ್ ಕತ್ತಿ

 ತುಮಕೂರು :

      ನೂತನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರು ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ|| ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗಾ ಶ್ರೀಗಳ ಆಶೀರ್ವಾದ ಪಡೆದರು.

      ಅನಂತರ ಮಾತನಾಡಿದ ಅವರು, ರಾಜ್ಯದ 4.36 ಕೋಟಿ ಜನರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಡಿ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಮೇಲೆ ವಿಶ್ವಾಸವಿಟ್ಟು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಿದ್ದಾರೆ. ಅವರ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಅವರು ಹೇಳಿದರು. ರಾಜ್ಯದ 4 ಕೋಟಿ 36 ಲಕ್ಷ ಜನತೆಗೆ ಆಹಾರ ಭದ್ರತೆ ಮತ್ತು ಆಹಾರ ವಿತರಣೆ ಮಾಡುವಂತಹ ಖಾತೆ ನನದಾಗಿದೆ. ಈ ಖಾತೆ ಬೇರೆಯವರಿಗೆ ನೀಡದೆ ನನಗೆ ನೀಡಿರುವುದು ನೂರಕ್ಕೆ ನೂರರಷ್ಟು ಸಂತಸ ತಂದಿದೆ ಎಂದರು.

      ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಯಾವುದೇ ರೀತಿಯ ತೊಂದರೆ ಹಾಗೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶ ಹೊಂದಿದ್ದು, ಇವರೆಲ್ಲರಿಗೂ ಸಮರ್ಪಕವಾಗಿ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಆಹಾರ ಇಲಾಖೆಯಲ್ಲಿ ರಾಜ್ಯಕ್ಕೆ ಮತ್ತು ಸರ್ಕಾರಕ್ಕೆ ಒಳ್ಳೆಯ ಹೆಸರು ತರುವಂತಹ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದರು.

      ಈ ಸಂದರ್ಭದಲ್ಲಿ ಹನುಮಂತಪ್ಪ ಕೊಡಬಾಗಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸಯ್ಯ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link