ನಾಳೆಯಿಂದ ಫೆ.5ರವರೆಗೆ ‘ವಿಧಾನಸೌಧ’ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ!!

ಬೆಂಗಳೂರು : 

      ನಾಳೆಯಿಂದ ಫೆ.5ರವರೆಗೆ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗುವುದರಿಂದ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ವಿಧಾನಸೌಧದದ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

      ಏಳು ದಿನಗಳ ಕಾಲ ನಡೆಯುವ ಈ ಅಧಿವೇಶನವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ವಿಧಾನಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

      ಕೋವಿಡ್‍ನಿಂದಾಗಿ ಉಂಟಾಗಿರುವ ಆರ್ಥಿಕ ಸಂಕಷ್ಟ, ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಅತಿವೃಷ್ಟಿ ಪರಿಹಾರ ವಿಳಂಬ ಮೊದಲಾದ ವಿಚಾರಗಳು ಅಧಿವೇಶನದಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಲಿವೆ.

      ಜ.29ರಿಂದ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು, ಅಧಿವೇಶನ ನಡೆಯಲಿದ್ದು, ಆ ಸಂದರ್ಭದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಸಚಿವ ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಬಿಕ್ಕಟ್ಟಿನ ಬೆನ್ನಲ್ಲೇ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರತಿಪಕ್ಷಗಳುವೊಡ್ಡುವ ಅಸ್ತ್ರಗಳನ್ನು ನೂತನ ಸಚಿವರು ಎದುರಿಸಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link