ತಿಪಟೂರು :
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಕೋಡಿಹಳ್ಳಿ ಗ್ರಾಮದ ಶ್ವೇತಾ(32) ಎಂಬ ಗೃಹಿಣಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಕೊಲೆಯೋ, ಆತ್ಮಹತ್ಯೆಯೋ ತನಿಖೆಯಿಂದ ತಿಳಿದು ಬರಬೇಕಿದೆ.
ಹೊನ್ನವಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಕೋಡಿಹಳ್ಳಿಯ ನಟರಾಜು (35) ಮತ್ತು ಶ್ವೇತ (32) ದಂಪತಿಗಳಾಗಿದ್ದು ಸಾಂಸಾರಿಕ ತೊಂದರೆಯಿಂದ ಶ್ವೇತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇವರ ಪತಿ ನಟರಾಜು ಅವರನ್ನು ಹೊನ್ನವಳ್ಳಿ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದು, ಶ್ವೇತಾಳ ಮೃತದೇಹ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
