ಬೆಂಗಳೂರು :
ಅನಾರೋಗ್ಯದಿಂದಾಗಿ ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ರಾಘವೇಂದ್ರ ರಾಜ್ ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಎರಡು ದಿನಗಳ ಹಿಂದೆ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದು ಗುಣಮುಖರಾದ ಕಾರಣ, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವಾರ ವಿಶ್ರಾಂತಿ ಪಡೆದ್ರೆ ಸರಿ ಹೋಗುತ್ತೆ ಎಂಬುದಾಗಿ ವೈದ್ಯರು ಹೇಳಿದ್ದಾರೆ. ಹೀಗಾಗಿ ಒಂದು ವಾರ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತೇನೆ. ವಾರದ ನಂತರ ಮತ್ತೆ ಶೂಟಿಂಗ್ ಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/02/Raghavendra-rajkumar18.2.jpg)