ಶಿರಾ :
ಚಲಿಸುತ್ತಿದ್ದ ಲಾರಿಯೊಂದಕ್ಕೆ ಹಿಂಬದಿಯಿಂದ ಬಂದ ಓಮ್ನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಗಂಬೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹೆದ್ದಾರಿಯ ಎಮ್ಮೇರಹಳ್ಳಿ ಬಳಿ ಶುಕ್ರವಾರ ನಡೆದಿದೆ.
ಎಮ್ಮೇರಹಳ್ಳಿ ಮೇಲು ಸೇತುವೆಯ ಬಳಿ ಮುಂದೆ ಚಲಿಸುತ್ತಿದ್ದ ಲಾರಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಐದು ಮಂದಿ ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರು ಮೈಸೂರಿನಿಂದ ಶಿರಾ ಸಮೀಪದ ದೇವಸ್ಥಾನವೊಂದಕ್ಕೆ ಬರುತ್ತಿದ್ದರು ಎನ್ನಲಾಗಿದ್ದು ಗಾಯಗೊಂಡ ಎಲ್ಲರೂ ಒಂದೇ ಕುಟುಂಬದವರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ