ಬೆಂಗಳೂರು:
ಶಾಲಾ ಶುಲ್ಕ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಇಂದು ಖಾಸಗಿ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಬೀದಿಗಿಳಿದು ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ.
ಕ್ಯಾಮ್ಸ್ ಸೇರಿದಂತೆ 10ಕ್ಕೂ ಹೆಚ್ಚು ಖಾಸಗಿ ಶಾಲೆಗಳ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಕಾಲ್ನಡಿಗೆಯಲ್ಲಿ ಹೊರಟು, ಫ್ರೀಡಂ ಪಾರ್ಕ್ ತಲುಪಿ ಸಮಾವೇಶ ನಡೆಸಲಿದ್ದಾರೆ. ಬಳಿಕ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ ತಮ್ಮ ಬೇಡಿಕೆ ಕುರಿತಾದ ಮನವಿ ಸಲ್ಲಿಸಲಿದ್ದಾರೆ. ಶಾಲೆ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಶಾಲೆ ಸಿಬ್ಬಂದಿ ಸೇರಿ 25 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.
ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಶಾಲಾ ಸಿಬ್ಬಂದಿ ಸೇರಿರುವುದರಿಂದ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಿದೆ. ರೈಲು ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಖಾಸಗಿ ಶಾಲೆಗಳ ಎಲ್ಲ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವುದರಿಂದ ಖಾಸಗಿ ಶಾಲಾ ಮಕ್ಕಳಿಗೆ ಬೋಧನೆ ಸ್ಥಗಿತಗೊಳಿಸಲಾಗಿದೆ. ಪರ್ಯಾಯವಾಗಿ ಶನಿವಾರ ಪೂರ್ಣ ತರಗತಿ ನಡೆಸಲು ತೀರ್ಮಾನಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/02/Untitled-2.jpg)