ಗದಗ :

ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ಮೃತ ಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ಗ್ರಾಮದ ಬಳಿ ಗುರುವಾರ ಸಂಭವಿಸಿದೆ.
ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವ ಹಿತ್ತಲಮನಿ (30 ವ), ಸೋಮವ್ವಾ ಅಡುಗೆಮನಿ (48 ವ) ಮೃತ ದುರ್ದೈವಿಗಳು. ಎಂದಿನಂತೆ ಹೊಲದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








