ಎಂ ಎನ್ ಕೋಟೆ :
ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿ ಮತ್ತಿಕೆರೆ ಗ್ರಾಮದ ರೈತ ಲಿಂಗರಾಜ್ ಅವರ ಮನೆಗೆ ಗುರುವಾರ ಆಕಸ್ಮಿಕ ಬೆಂಕಿ ಬಿದ್ದು ಮನೆಯಲ್ಲಿ ಇದ್ದಂತಹ ಎಂಟರಿಂದ ಹತ್ತು ಸಾವಿರ ರೂಪಾಯಿ ಮೌಲ್ಯದ ಕೊಬ್ಬರಿ ಸುಟ್ಟು ಬೂದಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ಆರಿಸಿ, ಮುಂದಾಗಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸದಿದ್ದರೆ, ಇನ್ನೂ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಸಾರ್ವಜನಿಕರು ಹೇಳಿದ್ದಾರೆ.
ರೈತ ಲಿಂಗರಾಜು ಮಾತನಾಡಿ, ನಮ್ಮ ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಮನೆಯಲಿದ್ದ ಕೊಬ್ಬರಿ ಸುಟ್ಟು ಕರಕಲಾಗಿದೆ. ಸುಮಾರು 2 ಲಕ್ಷ ರೂಗಳು ನಷ್ಟ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಪರಿಹಾರ ಕೊಡಬೇಕೆಂದು ರೈತ ಲಿಂಗರಾಜು ಹೇಳಿದ್ದಾರೆ. ಸ್ಥಳಕ್ಕೆ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಗುರುರೇಣುಕರಾಧ್ಯ, ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
