ಬೆಂಗಳೂರು :
‘ಅವಕಾಶ ಸಿಕ್ಕರೆ ಖಂಡಿತ ನಾನು ಬಿಗ್ ಬಾಸ್ ಮನೆಗೆ ಗೆ ಹೋಗುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ಬಿಗ್ ಬಾಸ್ ಸೀಸನ್ 8 ಗೆ ನನಗೆ ಆಹ್ವಾನ ಕೊಟ್ಟಿದ್ದರು, ಒಪ್ಪಿಕೊಂಡಿದ್ದೆ. ನನಗೂ ಹೋಗಲು ಆಸೆ ಇತ್ತು. ನನಗೆ ಒಂದು ವೇದಿಕೆ ಸಿಕ್ಕಿದಂತಾಗುತ್ತದೆ ಅಂತಾ ಯೋಚನೆ ಮಾಡಿದ್ದೆ. ಆದರೆ ಆಗ ಆರೋಗ್ಯ ಸಮಸ್ಯೆಯಿಂದ ಹೋಗಲು ಆಗಿರಲಿಲ್ಲ. ಈಗ ಕೆಲವು ಸ್ನೇಹಿತರು ಹೋಗ್ತೀರಾ ಅಂತಾ ಕೇಳುತ್ತದ್ದಾರೆ. ಚುನಾವಣೆಗಳು ಬಂದಿವೆ, ಅಲ್ಲಿ ಇಲ್ಲಿ ಜವಾಬ್ದಾರಿ ಹಾಕ್ತಾರೆ,ಹಾಗಾಗಿ ಹೋಗಲು ಸ್ವಲ್ಪ ಕಷ್ಟ ಆಗಬಹುದು ಎಂದರು.
ಮುಂದುವರಿದು ಮಾತನಾಡಿದ ಅವರು ವಿಶೇಷ ಆಹ್ವಾನಿತರಾಗಿ ಬನ್ನಿ ಅಂತಾ ಕರೆದರೆ ಮೂರ್ನಾಲ್ಕು ದಿನಕ್ಕೆ ಬಿಗ್ ಬಾಸ್ ಹೌಸ್’ಗೆ ಹೋಗಬಹುದು. ಆ ಮನೆಯಲ್ಲಿ ಯುವಕರು, ಸಿನಿಮಾದವರು, ಗಂಡುಮಕ್ಕಳು, ಹೆಣ್ಣುಮಕ್ಕಳು, ಸಿನಿಮಾದವರು ಇದ್ದಾರೆ. ಅಲ್ಲಿ ನಾನು ಹೋದರೆ ರಾಜಕಾರಣದ ಸ್ಪಾರ್ಕ್ ಹಚ್ಚಿಸಬಹುದು. ನಾನು ಅದನ್ನು ಅಲ್ಲಿ ಕ್ರಿಯೇಟ್ ಮಾಡಬಲ್ಲೆ. ಅವಕಾಶ ಸಿಕ್ಕಿದರೆ ಖಂಡಿತಾ ಬಿಗ್ ಬಾಸ್ ಮನೆಗೆ ಹೋಗುತ್ತೇನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ