ಬೆಂಗಳೂರು :

ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಹೊತ್ತಿರುವ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಪ್ರಕರಣ ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಆಗ್ರಹಿಸಿವೆ. ಈ ನಡುವೆ ರಮೇಶ್ ಜಾರಕಿಹೊಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಬುಲಾವ್ ನೀಡಿದ್ದಾರೆ.
ರಾಜ್ಯದ ಒಂದು ಲೋಕಸಭೆ ಹಾಗೂ 3 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇದು ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಉಂಟು ಮಾಡಿದ್ದು, ಬಿಜೆಪಿ ಹೈಕಮಾಂಡ್ ಕೂಡ ಕೆಂಡವಾಗಿದೆ ಎನ್ನಲಾಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








