ಬೆಂಗಳೂರು :
ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ.
ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಇಡಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. ಒಕ್ಕಲಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ ನೀಡಲಾಗುವಯದು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ ಪ್ರಕಟಿಸಲಾಗಿದೆ.
2021-22ನೇ ಸಾಲಿನ ಬಜೆಟ್ ನಲ್ಲಿ ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಸ್ಮೃತಿ ವನ ನಿರ್ಮಾಣ ಕ್ಕೆ ಎರಡು ಕೋಟಿ ಅನುದಾನ ನೀಡಲಾಗುವುದು. ತುಮಕೂರು ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 4ರ ಅಭಿವೃದ್ಧಿ ಗೆ 104ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿಯೂ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ವೃಷಭಾವತಿ ಕಣಿವೆ ನೀರನ್ನು ಸಂಸ್ಕರಿಸಿ ತುಮಕೂರು ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ, ರಾಮನಗರದ 234 ಕೆರೆಗಳಿಗೆ ಹರಿಸಲು ಯೋಜನೆಗೆ 500ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
ಪ್ರಮುಖ ಬೇಡಿಕೆಯಾದ ತೆಂಗು ಟೆಕ್ನಾಲಜಿ ಪಾರ್ಕ್ ಹೇಮಾವತಿ ನಾಲಾ ಆಧುನೀಕರಣಕ್ಕೆ 500ಕೋಟಿ ಅನುದಾನ ಹಾಗೂ ವಸಂತಾ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ. ತುಮಕೂರು ರಾಯದುರ್ಗ ಹಾಗೂ ತುಮಕೂರು ದಾವಣಗೆರೆ ರೈಲ್ವೆ ಯೋಜನೆ ಭೂಸ್ವಾಧೀನ ತ್ವರಿತಗೊಳಿಸುವ ಕುರಿತು ಬಜೆಟ್ ನಲ್ಲಿ ಪ್ರಸ್ತಾಪವಾಗಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
