ಬೆಂಗಳೂರು :
ಕರ್ನಾಟಕದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1 ಸಾವಿರದ ಸನ್ನಿಹಿತಕ್ಕೆ ಬರುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 934 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 628 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಂದೇ ದಿನ 609 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 939499 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಮೂವರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12390ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ರಾಜ್ಯದಲ್ಲಿ 8364 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 9,60,272ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ