ತುರುವೆಕೆರೆ :
ಶಾಸಕ ಮಸಾಲ ಜಯರಾಮ್ ಹಾಗೂ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರು ಭಾನುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಏಕಕಾಲದಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡರು.
ಲಸಿಕೆ ಹಾಕಿಸಿಕೊಂಡ ಶಾಸಕ ಮಸಾಲ ಜಯರಾಮ್ ಮಾತನಾಡಿ ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ ಸೋಂಕು ಹೆಚ್ಚುತ್ತಿದ್ದು ಕೊರೋನಾ 2ನೇ ಅಲೆ ಆರಂಭವಾಗುವ ಆತಂಕ ಶುರುವಾಗಿದೆ. ತಾಲ್ಲೂಕಿನಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷ ತುಂಬಿದ ದೀರ್ಘಾವಧಿ ಖಾಯಿಲೆವುಳ್ಳವರು ಕೋವಿಡ್ ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತಪ್ಪದೆ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೋನಾ ಸೋಂಕು ಹರಡದಂತೆ ಎಚ್ಚರ ವಹಿಸಿ ಎಂದು ತಾಲ್ಲೂಕಿನ ಜನತೆಗೆ ಮನವಿ ಮಾಡಿದರು.
ಇದೇ ಸಂಧರ್ಬದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ನಮ್ಮ ತಾಲ್ಲೂಕಿನಲ್ಲಿಯೂ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೋಂಕನ್ನು ನಿಯಂತ್ರಣದಲ್ಲಿಡಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದವರ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಎಚ್ಚರಿಸಿದರು. ಇದೇ ಸಂಧರ್ಭದಲ್ಲಿ ಅನೇಕರು ಕೋವಿಡ್ ಲಸಿಕೆ ಹಾಕಿಸಿಕೊಂಡರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಪ್ರಿಯ, ಡಾ.ಶ್ರೀಧರ್, ಡಾ. ನವೀನ್, ಡಾ.ಮುರುಳಿ, ಸಿಬ್ಬಂದಿಗಳಾದ ಚಂದ್ರಮ್ಮ, ಬೋರೇಗೌಡ, ಗಿಡ್ಡೇಗೌಡ ಸೇರಿದಂತೆ ಅನೇಕ ಮುಖಂಡರು ಪಾಲ್ಗೋಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ