ತುಮಕೂರು : ಪ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ

 ತುಮಕೂರು :

      ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಪಟ್ಟಣ ಪಂಚಾಯಿತಿಯ 16 ವಾರ್ಡ್‍ಗಳು, ತಿಪಟೂರು ನಗರಸಭೆ ವಾರ್ಡ್ ನಂ.31 ಹಾಗೂ ಕೊರಟಗೆರೆ ಪಟ್ಟಣ ಪಂಚಾಯಿತಿ ವಾರ್ಡ್ ನಂ.4ರ ವ್ಯಾಪ್ತಿಯಲ್ಲಿ ಮಾರ್ಚ್ 29ರಂದು ಉಪಚುನಾವಣೆ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿ(ಮಾರ್ಚ್ 27ರ ಸಂಜೆ 5 ಗಂಟೆಯಿಂದ 29ರ ಸಂಜೆ 5 ಗಂಟೆಯವರೆಗೆ)ಯಲ್ಲಿ ಮದ್ಯ ಮಾರಾಟ/ ಹಂಚಿಕೆ/ ಸಾಗಾಣಿಕೆ(ಕೆ.ಎಸ್.ಬಿ.ಸಿ.ಎಲ್ ಡಿಪೋ ಹೊರತುಪಡಿಸಿ)ಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ.

     ನಿಷೇಧಾಜ್ಞೆಯು ಚುನಾವಣೆ ನಡೆಯಲಿರುವ ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ