ಬೆಂಗಳೂರು :
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ 3ನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ.
3ನೇ ವಿಡಿಯೋ ಹೇಳಿಕೆ ರಿಲೀಸ್ ಮಾಡಿರುವ ಯುವತಿ, ನಾನು 24 ದಿನದಿಂದ ನನಗೆ ಜೀವ ಬೆದರಿಕೆ ಇತ್ತು. ಈವಾಗ ನನಗೆ ಧೈರ್ಯ ಬಂದಿದೆ. ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಇಂದು ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಹೇಳಿದ್ದಾಳೆ. ಎಲ್ಲ ಪಕ್ಷದ ನಾಯಕರು, ರಾಜ್ಯದ ಜನರು ನನಗೆ ಬೆಂಬಲಿಸುತ್ತಿದ್ದಾರೆ. ಹೀಗಾಗಿ ನನಗೆ ಧೈರ್ಯ ಬಂದಿದೆ. ವಕೀಲ ಜಗದೀಶ್ ಅವರ ಮೂಲಕ ಇಂದು ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುತ್ತಿದ್ದೇನೆ ಎಂದು ಹೇಳಿದ್ದಾಳೆ.
ವಕೀಲರ ಮೂಲಕ ಕಳುಹಿಸಿದ ದೂರನ್ನು ಅನಿವಾರ್ಯವಾಗಿ ಸ್ವೀಕರಿಸಿ ಪೊಲೀಸರು ಎಫ್ಐಆರ್ ದಾಖಲು ಮಾಡಬೇಕಾಗಿದೆ.ಒಟ್ಟಾರೆ ಸಿಡಿ ಲೇಡಿ ನಡೆ ತೀವ್ರ ಕುತೂಹಲ ಕೆರಳಿಸಿದ್ದು, ಯುವತಿ ದೂರು ನೀಡಿದ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ