ಬೆಂಗಳೂರು :
ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ಡಾllಗೌರವ್ ಗುಪ್ತಾ ಅಧಿಕಾರ ಸ್ವೀಕರಿಸಿದ್ದಾರೆ.
ಬಿಬಿಎಂಪಿ ಆಯುಕ್ತರಾಗಿದ್ದ ಎನ್.ಮಂಜುನಾಥ್ ಪ್ರಸಾದ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಅವರು ಇದೇ ಹುದ್ದೆಯಲ್ಲಿದ್ದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನೂ ಗುಪ್ತಾ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿ, ಸರ್ಕಾರದ ಮಟ್ಟದಲ್ಲಿ ನನ್ನನ್ನು ಬಿಬಿಎಂಪಿಯ ಮುಖ್ಯ ಆಯುಕ್ತರನ್ನಾಗಿ ನೇಮಿಸಿ ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದಾರೆ. ಪಾಲಿಕೆಗೆ ಬರುವ ಎಲ್ಲಾ ರೀತಿಯ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮವಹಿಸಲಾಗುವುದು ಎಂದರು.
ಕೋವಿಡ್ ಸೋಂಕು ಕ್ರಮೇಣ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಡಾ ಗೌರವ್ ಗುಪ್ತಾ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/04/BBMP-officer.jpg)