ಮೈಸೂರು :
ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರವಾಸಿ ತಾಣಗಳು, ರೆಸಾರ್ಟ್ಗಳು, ಕನ್ವೆನ್ಷನ್ಹಾಲ್, ಪಾರ್ಟಿ, ರಿಕ್ರಿಯೇಷನ್ ಕ್ಲಬ್ ಹಾಗೂ ಚಿತ್ರಮಂದಿರ ಪ್ರವೇಶಕ್ಕೆ ಕೋವಿಡ್-19 ನೆಗೆಟಿವ್ ವರದಿ ತರುವುದನ್ನು ಕಡ್ಡಾಯ ಮಾಡಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ಹರಡುವುದು ದಿನೇ ದಿನೇ ಹೆಚ್ಚಾಗುತ್ತಿದ್ದು, ಮೈಸೂರು ಜಿಲ್ಲೆಯಿಂದ ಅನೇಕ ಉದ್ಯೋಗ-ವ್ಯಾಪಾರದ ಉದ್ದೇಶಗಳಿಗಾಗಿ ಪ್ರತಿ ದಿನ ಬೆಂಗಳೂರು ಜಿಲ್ಲೆಗೆ ಹೋಗಿ ಬರುತ್ತಿರುತ್ತಾರೆ. ಅಲ್ಲದೇ ಮೈಸೂರು ಜಿಲ್ಲೆಯ ಪ್ರವಾಸಿ ತಾಣವಾಗಿರುವುದರಿಂದ ಅನೇಕ ಪ್ರವಾಸಿಗರು ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿರುತ್ತಾರೆ.
ಇದರಿಂದ ಮೈಸೂರು ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕಳೆದ 74 ಗಂಟೆಗಳ ಕೋವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ