ಬೆಂಗಳೂರು :
ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ, ಶತಾಯುಷಿ ಪ್ರೊllಜಿ. ವೆಂಕಟಸುಬ್ಬಯ್ಯ ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಅವರಿಗೆ 108 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಏ.18ರ ತಡರಾತ್ರಿ 1.30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ.
ಈ ಮೂಲಕ ಕನ್ನಡ ಸಾರಸ್ವತ ಲೋಕ ಮಹಾನ್ ಚೇತನವನ್ನು ಕಳೆದುಕೊಂಡಂತೆ ಆಗಿದೆ. ಇಂತಹ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅಧಿಸೂಚನೆ ಹೊರಡಿಸಿದ್ದು, ಪದ್ಮಶ್ರೀ ಪುರಸ್ಕೃತ, ನಿಘಂಟು ತಜ್ಞ, ಶತಾಯುಷಿ, ಪ್ರೊ.ಜಿ.ವೆಂಕಟಸುಬ್ಬಯ್ಯ, ಬೆಂಗಳೂರಿನಲ್ಲಿ ದಿನಾಂಕ 19-04-2021ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತ ಪಡಿಸುತ್ತದೆ.
ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ