ಗುಬ್ಬಿ :
ಪಟ್ಟಣದ ವಿವಿದ ಬಡಾವಣೆಗಳ ಕನ್ಸ್‍ರ್ ವೆನ್ಸಿಗಳಲ್ಲಿ ಕಳೆದ ಹಲವು ವರ್ಷಗಳಿಂದ ಸಂಗ್ರಹವಾಗಿದ್ದ ತ್ಯಾಜ್ಯವನ್ನು ತೆಗೆಸುವಲ್ಲಿ ಪಟ್ಟಣ ಪಂಚಾಯ್ತಿ ಮುಂದಾಗಿದೆ. ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಿ.ಹೆಚ್.ರಸ್ತೆಯಂದ ಎ.ಪಿ.ಎಂ.ಸಿ. ಕಾಂಪೌಂಡ್ ವರೆಗೆ ಕನ್ಸ್‍ರ್‍ವೆನ್ಸಿಯಲ್ಲಿ ಕಳೆದ ಹಲವು ವರ್ಷಗಳಿಂದಲೂ ಸಂಗ್ರಹವಾಗಿದ್ದ ತ್ಯಾಜ್ಯವನ್ನು ಸಂಪೂರ್ಣವಾಗಿ ತೆಗೆಸುವ ಮೂಲಕ ಪಟ್ಟಣದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಕಳೆದ ಹಲವು ದಿನಗಳಿಂದ ನಿರಂತರವಾಗಿ ಕಸ ತೆಗೆಯುವ ಕಾರ್ಯ ಕೈಗೊಂಡಿದ್ದು ಪಟ್ಟಣ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸದಸ್ಯರುಗಳ ಸಹಕಾರದೊಂದಿಗೆ ಮಹತ್ವದ ಕಾರ್ಯ ಮಾಡಲಾಗುತ್ತಿದೆ ಎಂದು ಸದಸ್ಯ ಜಿ.ಆರ್.ಶಿವಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸದಸ್ಯ ಜಿ.ಸಿ.ಲೋಕೇಶ್‍ಬಾಬು, ಆರೋಗ್ಯ ನಿರೀಕ್ಷಕಿ ವಿದ್ಯಾ ಇದ್ದರು.