ಬೆಂಗಳೂರು :
ನಿನ್ನೆಯಿಂದ ತೀವ್ರ ಜ್ವರದಿಂದ ಬಳಲುತ್ತಿರುವಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ದರಾಮಯ್ಯ ಅವರಿಗೆ ನಿನ್ನೆಯಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯು ಕೊರೋನಾ ನೆಗೆಟಿವ್ ಎಂಬುದಾಗಿ ತಿಳಿದು ಬಂದಿದೆ.
ಕೊರೊನಾ ಪರೀಕ್ಷೆ ಹಾಗೂ ಚಿಕಿತ್ಸೆಗಾಗಿ ನಗರದ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯ ವೈದ್ಯರು ಅವರನ್ನು ತಪಾಸಣೆಗೆ ಒಳಪಡಿಸಿ, ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಿಸಿಕೊಂಡು, ಚಿಕಿತ್ಸೆ ನೀಡುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ