ರಾಯಚೂರು:
ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭಗೊಳ್ಳಲಿದೆ.
ಶ್ರೀ ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕರು ಈ ಕುರಿತು ಗುರುವಾರ ಆದೇಶ ಹೊರಡಿಸಿದ್ದು, ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪ್ರತ್ಯಕ್ಷವಾಗಿ ಮಂತ್ರಾಲಯ ಕ್ಷೇತ್ರಕ್ಕೆ ಬರಲಾಗದವರು ಲಿಂಕ್ www.srsmatha.org/online ಕ್ಲಿಕ್ ಮಾಡಿ ಆನ್ಲೈನ್ ಮೂಲಕ ದರ್ಶನ ಪಡೆದು ಸೇವೆಗಳನ್ನು ಸಲ್ಲಿಸಬಹುದು ಎಂದು ಮಾಹಿತಿ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ