ಮಧ್ಯಪ್ರದೇಶ:
ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಹುಲಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮರಿಯಾ ಪ್ರದೇಶದಲ್ಲಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದ ಉಮಾರಿಯ ಜಿಲ್ಲೆ ವ್ಯಾಪ್ತಿಯ ಗುನ್ಘುಟ್ಟಿ ಅರಣ್ಯ ವಲಯದ ಜಿಲ್ಲಾ ಕೇಂದ್ರದಿಂದ 35 ಕಿಲೋಮೀಟರ್ ದೂರದಲ್ಲಿ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿ ಹುಲಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಇಂತಹ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ವಾಹನ ಚಾಲಕರಿಗೆ ಕಾಣಿಸುವ ರೀತಿಯಲ್ಲಿ ಹೊಳೆಯುವ ಬೋರ್ಡ್ ಗಳನ್ನು ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಹಾಕುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಉಮರಿಯಾ ವಲಯಾರಣ್ಯಾಧಿಕಾರಿ (ಡಿಎಫ್ ಒ) ಮೋಹಿತ್ ಸೂದ್ ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ