ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕೆ : ಕೋವಿಡ್ ಪರೀಕ್ಷೆ

ಹುಳಿಯಾರು :

       ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್‍ಎಸ್‍ಎಸ್ ಮತ್ತು ರೆಡ್‍ಕ್ರಾಸ್ ಘಟಕ ತಾಲ್ಲೂಕಿನ ಆಡಳಿತ, ಸಾರ್ವಜನಿಕ ಆಸ್ಪತ್ರೆ ಹಾಗು ಪ.ಪಂ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

       ಸರ್ಕಾರವು ಕಾಲೇಜುಗಳನ್ನು ಆರಂಭಿಸುವ ಹಿನ್ನಲೆಯಲ್ಲಿ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಲಸಿಕೆ ಪಡೆಯುವ ಕಾರ್ಯಕ್ರಮದ ಅಂಗವಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದಲ್ಲಿ 100 ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದರೆ 40 ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಯಶಸ್ವಿಯಾಯಿತು.

      ಪ್ರಾಚಾರ್ಯ ಬಿಳಿಗೆರೆ ಕೃಷ್ಣಮೂರ್ತಿ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಇದುವರೆಗೂ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು. ಈಗ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಕಾರ್ಯ ಆರಂಭವಾಗಿದೆ. ಪ್ರತಿಯೊಬ್ಬರೂ ಲಸಿಕೆ ಬಗ್ಗೆ ಆತಂಕ ಬಿಟ್ಟು, ಧೈರ್ಯವಾಗಿ ಪಡೆದುಕೊಳ್ಳಬೇಕು. ಲಸಿಕೆ ಪಡೆದುಕೊಳ್ಳುವ ಮೂಲಕ ಕೋವಿಡ್ ಸೋಂಕು ಮುಕ್ತ ರಾಷ್ಟ್ರವನ್ನಾಗಿ ಮಾಡಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.

      ಅಭಿಯಾನದಲ್ಲಿ ಕಾಲೇಜಿನ ಉಪನ್ಯಾಸಕರುಗಳಾದ ಮೋಹನ್, ವಲಿ, ಸುಷ್ಮಾಬೀರಾದಾರ್, ಖಲೀಲ್, ಮಲ್ಲಿಕಾರ್ಜುನ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಯ್ಯ, ಗ್ರಂಥಪಾಲಕ ಡಾ.ಲೋಕೇಶ್‍ನಾಯ್ಕ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link