ನವದೆಹಲಿ :
ವೈದ್ಯಕೀಯ ಕಾಲೇಜು ಪ್ರವೇಶದಲ್ಲಿ ( Medical College Admissions ) ಮೀಸಲಾತಿ ವೇಳೆ OBCಗೆ ಶೇ.27, ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ (EWS) ಗೆ ಶೇ.10ರಷ್ಟು ಮೀಸಲಾತಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಕಳೆದ ಸೋಮವಾರ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದಿಂದ ಬಾಕಿ ಇರುವ ಈ ಸಮಸ್ಯೆಗೆ ಪರಿಣಾಮಕಾರಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ನಿರ್ಧಾರವು ಪ್ರತಿ ವರ್ಷ ಎಂಬಿಬಿಎಸ್ ನಲ್ಲಿ ಸುಮಾರು 1,500 ಒಬಿಸಿ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿಯಲ್ಲಿ 2,500 ಒಬಿಸಿ ವಿದ್ಯಾರ್ಥಿಗಳಿಗೆ ಮತ್ತು ಎಂಬಿಬಿಎಸ್ ನಲ್ಲಿ ಸುಮಾರು 550 ಇಡಬ್ಲ್ಯುಎಸ್ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಸುಮಾರು 1000 ಇಡಬ್ಲ್ಯುಎಸ್ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಅಖಿಲ ಭಾರತ ಕೋಟಾ (ಎಐಕ್ಯೂ) ಅಡಿಯಲ್ಲಿ ಮೀಸಲಾತಿಯನ್ನು ( reservation ) ನೀಡಲಾಗುವುದು. ಒಬಿಸಿಗಳಿಗೆ ಶೇ. 27 ಮತ್ತು ಇಡಬ್ಲ್ಯೂಎಸ್ಗೆ ಶೇ. 10 ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ “ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಎಐಕ್ಯೂ ಅಡಿಯಲ್ಲಿ, ಎಸ್ಸಿಗೆ 15% ಮೀಸಲಾತಿ ಯನ್ನು ಮತ್ತು ಈಗಾಗಲೇ ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ 7.5% ಮೀಸಲಾತಿಯನ್ನು ನೀಡಲಾಗುತ್ತದೆ. ಹೊಸ ಕೋಟಾ ಅಸ್ತಿತ್ವದಲ್ಲಿರುವ ಮಾನದಂಡಗಳ ಜೊತೆಗೆ ಇರುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
