ನವದೆಹಲಿ:
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರ ಅಮರ್‌ಜೀತ್ ಸಿನ್ಹಾ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಅವರನ್ನು ಪ್ರಧಾನಿ ಮೋದಿಯವರ ಸಲಹೆಗಾರರನ್ನಾಗಿ ನೇಮಿಸಲಾಯಿತು. ಅವರ ರಾಜೀನಾಮೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಸಿನ್ಹಾ 1983 ರ ಬ್ಯಾಚ್ ಬಿಹಾರ ಕೇಡರ್ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಯಾಗಿದ್ದಾರೆ. ಸಿನ್ಹಾ ಅವರು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ ಮತ್ತೊಬ್ಬ ಪ್ರಮುಖ ಅಧಿಕಾರಿ ಭಾಸ್ಕರ್ ಖುಲ್ಬೆ ಅವರೊಂದಿಗೆ ಸಲಹೆಗಾರರಾಗಿ ನೇಮಕಗೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ