ತುಮಕೂರು :
ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‍ನ ಪ್ರಥಮ ಡಿಪ್ಲೊಮಾ ಪ್ರವೇಶಾತಿಗೆ ನಾನ್ ಇಂಟರ್ಯಾಕ್ವಿವ್ ಕೌನ್ಸಿಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಫಲಿತಾಂಶ ಪಡೆದು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು https://dtetech.karnataka.gov.in/kartechnical & www.cetonline.karnataka.gov.in/kea ಜಾಲತಾಣದಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು, ಮೂಲ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 21ರೊಳಗಾಗಿ ಸಂಸ್ಥೆಯ ಸಹಾಯಕ ಕೇಂದ್ರದಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರು ಅಥವಾ ಮೊ.ಸಂ. 9448660935ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಆನಂದ್ ಎಂ.ಎಸ್. ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ