ಬೆಂಗಳೂರು :
ಕೊರೋನಾ ಆತಂಕದ ನಡುವೆಯೇ ನಾಳೆಯಿಂದ(ಆಗಸ್ಟ್ 19) ಸೆ.3ರವರೆಗೆ ದ್ವಿತೀಯ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.
ರಾಜ್ಯದ 187 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕೋವಿಡ್ ಸೋಂಕು ಇದ್ರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೋವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ಇರುತ್ತೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ RT-PCR ಟೆಸ್ಟ್ನ್ನು ಕಡ್ಡಾಯವಾಗಿ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತರಬೇಕಿದೆ. 72 ಗಂಟೆಗಳ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ನಿರ್ದೇಶಕಿ ಸ್ನೇಹಲ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ