ಬೆಂಗಳೂರು :
ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಸಮಿತಿ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 60 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಈ ಕುರಿತಂತೆ ನೌಕರರು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಸಾರಿಗೆ ಸಂಸ್ಥೆಗೆ ಯಾವ ರೀತಿ ಆದಾಯ ತರಬೇಕು ಎಂಬುದರ ಕುರಿತಂತೆ ಚಿಂತನೆ ನಡೆಸಲಾಗುತ್ತಿದೆ. ಹಲವು ತಜ್ಞರ ಜೊತೆ ಚರ್ಚೆ ಆರಂಭಿಸಿದ್ದೇನೆ.
ಶೀಘ್ರದಲ್ಲೇ ಎಕ್ಸ್ಪರ್ಟ್ ಕಮಿಟಿ ರಚನೆ ಮಾಡುತ್ತೇನೆ. ಯಾವ ರೀತಿ ಲಾಭ ಮಾಡಬಹುದು. ಬಂಡವಾಳ ಹೂಡುವುದರಿಂದ ಹಿಡಿದು ಎಲ್ಲವನ್ನೂ ಚರ್ಚೆ ಮಾಡುತ್ತೇವೆ. ನಾಲ್ಕೈದು ತಿಂಗಳಲ್ಲಿ ವರದಿ ತರಿಸಲಾಗುವುದು. ಕೆಎಸ್ಆರ್ಟಿಸಿಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ