ಮುಂಬೈ:
ಯೂಟ್ಯೂಬ್ ಈಗ ನನಗೆ ತಿಂಗಳಿಗೆ 4 ಲಕ್ಷ ರೂ.ಗಳನ್ನು ಪಾವತಿಸುತ್ತದೆ’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.
ನವದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇ ಯ ಪ್ರಗತಿಯನ್ನು ಪರಿಶೀಲಿಸಲು ಹೋಗಿದ್ದ ಹರಿಯಾಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಕೋವಿಡ್ ಸಾಂಕ್ರಾಮಿಕ (Covid virus) ರೋಗದ ಸಂದರ್ಭದಲ್ಲಿ ತಾವು ಅನುಭವಿಸಿದ ಅನುಭವಗಳ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ತೆರೆದಿಟ್ಟರು ಮತ್ತು ಆ ಸಮಯವನ್ನು ಅವರು ಹೇಗೆ ಬಳಸಿಕೊಂಡರು ಎಂಬುದನ್ನು ಹಂಚಿಕೊಂಡರು.
ಆ ವೇಳೆ ಅಡುಗೆ ಮಾಡುವುದನ್ನ ಕಲಿತೆ. ಅಲ್ಲದೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲು ಆರಂಭಿಸಿದೆ. ಆ ವಿಡಿಯೋಗಳನ್ನು ಯೂಟೂಬ್ಗೆ ಅಪ್ಲೋಡ್ ಮಾಡುತ್ತಿದ್ದು, ವೀಕ್ಷಕರ ಸಂಖ್ಯೆ ಹೆಚ್ಚಾಗಿ ನನಗೀಗ ಯೂಟೂಬ್ನಿಂದ ತಿಂಗಳಿಗೆ 4 ಲಕ್ಷ ರೂಪಾಯಿ ಪಾವತಿ ಆಗ್ತಿದೆ ಎಂದು ನಿತಿನ್ ಗಡ್ಕರಿ ವಿವರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ