ನವದೆಹಲಿ :
ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು ಖರೀದಿಸುವ ಮೂಲಕ ಟಾಟಾ ಗ್ರೂಪ್ ಬಿಡ್ ನಲ್ಲಿ ಗೆದ್ದಿದೆ.
ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯ ಶೇಕಡಾ 100 ರಷ್ಟು ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ನಿರ್ವಹಣೆ ಮತ್ತು ಪ್ರಯಾಣಿಕರಿಗೆ ಪೂರಕ ಸೇವೆ ಒದಗಿಸುವ ಕಂಪನಿಯಾದ ಏರ್ ಇಂಡಿಯಾ ಸ್ಯಾಟ್ಸ್ ಏರ್ಪೋರ್ಟ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ನಿಂದಲೂ ಶೇ. 50 ರಷ್ಟು ಬಂಡವಾಳ ಹಿಂಪಡೆಯಲು ಸರ್ಕಾರ ಉದ್ದೇಶಿಸಿದೆ.
ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ ಟಾಟಾ ಗ್ರೂಪ್ ಸೇರಿದಂತೆ ಹಲವು ಖಾಸಗಿ ಕಂಪನಿಗಳು ಏರ್ ಇಂಡಿಯಾ ಖರೀದಿಗೆ ಬಿಡ್ ಸಲ್ಲಿಸಿದ್ದವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ