ಬೆಂಗಳೂರು :
ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.
ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ನಿಂದಾಗಿ ಈಗಾಗಲೇ ಒಂದು ಕಾಲು ತೆಗೆಯಲಾಗಿತ್ತು. ಮಧುಮೇಹ ಹಾಗೂ ಇನ್ನಿತರ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ