ಐಸಿಟಿ ಅಕಾಡೆಮಿ ಜೊತೆಗೆ ಒಡಂಬಡಿಕೆ

ದಾವಣಗೆರೆ:


ಅ.5ನಗರದ ಜಿ ಎಂ ತಾಂತ್ರಿಕ ಮಹಾವಿದ್ಯಾಲಯವು ಇತ್ತೀಚೆಗೆ ನಡೆದ ಬೆಳವಣಿಗೆಯಲ್ಲಿ ಐಸಿಟಿ ಅಕಾಡೆಮಿ ಜೊತೆಗೆ ಒಡಂಬಡಿಕೆಯನ್ನು ಮಾಡಿಕೊಂಡಿದೆ.

ಐ ಸಿ ಟಿ ಅಕಾಡೆಮಿಯು ಭಾರತ ಸರ್ಕಾರದ ಅಡಿಯಲ್ಲಿ ಮತ್ತು ರಾಜ್ಯ ಸರ್ಕಾರಗಳ ಸಹಯೋಗ ಮತ್ತು ಕೈಗಾರಿಕೆಗಳ ಸಹಕಾರದಿಂದ ರೂಪಿತವಾದ ಒಂದು ಲಾಭರಹಿತ ಸಂಸ್ಥೆಯಾಗಿದೆ. ಮುಂದಿನ ಪೀಳಿಗೆಯ ಪ್ರತಿಭೆಗಳನ್ನು ರೂಪಿಸಲು ಈ ಸಂಸ್ಥೆಯು ಜಿ ಎಂ ಐ ಟಿ ಕಾಲೇಜಿನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದೆ. ಜಿ ಎಂ ಐ ಟಿ ತಾಂತ್ರಿಕ ಮಹಾವಿದ್ಯಾಲಯದಿಂದ ಅನೇಕ ರೀತಿಯ ಚಟುವಟಿಕೆಗಳನ್ನು ಹಮ್ಮಿಕೋಳ್ಳುತ್ತಿದ್ದು, ಅವುಗಳಲ್ಲಿ ಕೈಗಾರಿಕೆ ಮತ್ತು ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಚಟುವಟಿಕೆಗಳು, ಮುಂದಿನ ಪೀಳಿಗೆಯ ಅಧ್ಯಾಪಕರುಗಳನ್ನು ಮತ್ತು ವಿದ್ಯಾರ್ಥಿಗಳನ್ನು ರೂಪಿಸುವ ಬಗ್ಗೆ, ಕೈಗಾರಿಕೆಗಳಿಗೆ ಬೇಕಾದ ಕೌಶಲ್ಯತೆಗಳನ್ನು ತರಬೇತಿ ಕೊಡುವುದರ ಮೂಲಕ ವಿದ್ಯಾರ್ಥಿಗಳನ್ನು ಕೈಗಾರಿಕೆಗಳಿಗೆ ಸಿದ್ಧಗೊಳಿಸುವುದು, ಅಧ್ಯಾಪಕರುಗಳನ್ನು ಮತ್ತು ವಿದ್ಯಾರ್ಥಿಗಳನ್ನು ಸಂಶೋಧನೆ ಮತ್ತು ಅಭಿವೃದ್ದಿಯಲ್ಲಿ ತೊಡಗಿಸುವುದು, ಯುವ ಸಬಲೀಕರಣ ಮತ್ತು ಕೈಗಾರಿಕೋದ್ಯಮಿಗಳನ್ನಾಗಿ ತಯಾರು ಮಾಡುವುದು ಮುಂತಾದವುಗಳಾಗಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಒಂಡಂಬಡಿಕೆಯಿಂದ ಅಧ್ಯಾಪಕರುಗಳ ಬುದ್ಧಿಮಟ್ಟ ಮತ್ತು ವಿದ್ಯಾರ್ಥಿಗಳ ಕೈಗಾರಿಕಾ ಕೌಶಲ್ಯತೆಗಳನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಹೆಚ್ಚಿನ ವಿದ್ಯಾರ್ಥಿಗಳು ಉದ್ಯೋಗವಕಾಶವನು ಗಿಟ್ಟಿಸಿಕೊಳ್ಳುವಲ್ಲಿ ಸಹಕಾರಿಯಾಗಿದೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿ ಶ್ರೀ ವೈ ಯು ಸುಭಾಶ್ಚಂದ್ರ, ಪ್ರಾಂಶುಪಾಲರಾದ ಡಾ. ವೈ ವಿಜಯಕುಮಾರ್, ಐಸಿಟಿ ಅಕಾಡೆಮಿ ದಾವಣಗೆರೆವಿಭಾಗದ ಸಂಯೋಜಕರಾದ ಶ್ರೀ ಜಕಉಲ್ಲಾ ಎಂ ಎಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾದ ಡಾ. ಪ್ರವೀಣ್ ಜೆ ಮುಂತಾದವರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link