ಬೆಂಗಳೂರು :
ರಾಜ್ಯದಲ್ಲಿ ಇಂದಿನಿಂದ ಆನ್ ಲೈನ್ ಗೇಮ್ ಗಳನ್ನು ನಿಷೇಧಿಸಿ ರಾಜ್ಯ ಸರಕಾರ ಭಾನುವಾರ ಅಧ್ಯಾದೇಶ ಜಾರಿ ಮಾಡಿದೆ.
ರಾಜ್ಯದಲ್ಲಿ ಆನ್‌ಲೈನ್ ಜೂಜು ಅಥವಾ ಬೆಟ್ಟಿಂಗ್‌ಗೆ ನಿಷೇಧ ಹೇರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಈ ಕುರಿತು ಹೈಕೋರ್ಟ್‌ಗೆ ರಿಟ್ ಅರ್ಜಿಯೂ ಸಲ್ಲಿಕೆಯಾಗಿದ್ದು, ಆನ್‌ಲೈನ್ ಬೆಟ್ಟಿಂಗ್ ಕುರಿತು ಸ್ಪಷ್ಟ ನಿಲುವು ತೆಗೆದುಕೊಳ್ಳುವಂತೆ ಸರಕಾರಕ್ಕೆ ಹೈಕೋರ್ಟ್ ಹಲವು ಬಾರಿ ತಾಕೀತು ಮಾಡಿತ್ತು.
ಆನ್‌ಲೈನ್ ಮೂಲಕ ಗೇಮ್ ಆಡುವುದು, ಬೆಟ್ಟಿಂಗ್, ಟೋಕನ್ ಮೂಲಕ ಹಣದ ಆಟ ಆಡುವುದು, ಎಲೆಕ್ಟ್ರಾನಿಕ್ ಮನಿ, ಯಾವುದೇ ಆಟಕ್ಕೆ ಆನ್‌ಲೈನ್ ಮೂಲಕ ಹಣದ ವರ್ಗಾವಣೆ ಮಾಡುವುದಕ್ಕೆ ಇನ್ನು ಮುಂದೆ ನಿಷೇಧವಿರಲಿದ್ದು, ಅಪರಾಧ ಎಂದು ಪರಿಗಣಿಸಲಾಗುತ್ತದೆ.
ಕರ್ನಾಟಕ ಪೊಲೀಸ್ ಕಾಯ್ದೆ, 1963ಕ್ಕೆ ತಿದ್ದುಪಡಿ ತಂದು ಕಂಪ್ಯೂಟರ್ ಡಿವೈಸ್, ಮೊಬೈಲ್, ಮೊಬೈಲ್ ಆಯಪ್, ಎಲೆಕ್ಟ್ರಾನಿಕ್ ಸಾಧನ ಬಳಸಿ ಆನ್‌ಲೈನ್ ಮೂಲಕ ಹಣದ ಅವ್ಯವಹಾರ ನಡೆಸುವ ಜೂಜಾಟವನ್ನು ನಿಷೇಧಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ