ಚಳ್ಳಕೆರೆ:

ಚಳ್ಳಕೆರೆ ಚಳ್ಳಕೆರೆ ಠಾಣಾವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬುಡ್ನಹಟ್ಟಿ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಚಲಿಸುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಮೃತಪಟ್ಟವನು ಎಂ.ಗಂಗಾಧರಚಾರ್(65) ಎಂದು ಗುರುತಿಸಲಾಗಿದೆ. ಬುಡ್ನಹಟ್ಟಿ ಗ್ರಾಮದಲ್ಲಿ ಖಾಲಿ ನಿವೇಶನವನ್ನು ನೋಡಲು ತೆರಳಿ ವಾಪಾಸ್ ಆಗುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಪಿಎಸ್ಐ ಮಹೇಶ್ಗೌಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








