ಹುಳಿಯಾರು:

ಹುಳಿಯಾರು ಹೋಬಳಿಯ ಕೆಂಕೆರೆ ಬರದಲೇಪಾಳ್ಯ ಗ್ರಾಮಗಳ ಮಧ್ಯೆ ಇರುವ ರಸ್ತೆಯಲ್ಲಿ ಮಳೆ ಬಂದರೆ ಹಳ್ಳದ ನೀರು ಹರಿದು ಸಂಚಾರ ಸ್ಥಗಿತವಾಗುತ್ತದೆ. ಹಾಗಾಗಿ ಈ ರಸ್ತೆಯಲ್ಲಿ ಸೇತುವೆ ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮಳೆ ಬಂದೆ ಹಳ್ಳದ ನೀರು ಸುಮಾರು 3 ರಿಂದ 4 ಅಡಿ ನಿಂತು ಸಂಚಾರ ಅಸ್ತವ್ಯಸ್ತವಾಗುತ್ತದೆ. ಹೈನುಗಾರರು ನಿತ್ಯ ಬೆಳಗ್ಗೆ ಸಂಜೆ ಹಾಲು ಹಾಕಲು ಕೆಂಕೆರೆ ಡೇರಿಗೆ ಬಂದು ಹೋಗಲು ತೊಂದರೆಯಾಗುತ್ತದೆ.
ಅಲ್ಲದೆ ದನಕರುಗಳು ಓಡಾಡಲು, ವಿದ್ಯಾರ್ಥಿಗಳು ಶಾಲೆಗೆ ಬಂದೋಗಲು ಭಾರಿ ತೊಂದರೆಯಾಗುತ್ತದೆ. ಹಾಗಾಗಿ ಈ ಹಳ್ಳದ ನೀರು ಹರಿಯಲು ಸೇತುವೆ ನಿರ್ಮಿಸಿಕೊಡುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಈಗಾಲಾದರೂ ಕೆಂಕೆರೆಯಿಂದ ಬರದಲೇಪಾಳ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







