ಕುಣಿಗಲ್:
ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದವರ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಮಾರ್ಕೋನಹಳ್ಳಿ ಡ್ಯಾಂಗೆ ಭಾನುವಾರ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಜಲಾಶಯದ ಕೋಡಿ ನೀರಿನಲ್ಲಿ ಇಳಿದು ಆಟವಾಡುತ್ತಾ ಸೆಲ್ಫಿ ತೆಗೆದುಕೊಳ್ಳುವ ವೇಳೆಯಲ್ಲಿ ಹೆಚ್ಚು ನೀರು ಹರಿದ ಪರಿಣಾಮ ಕೊಚ್ಚಿ ಹೋಗಿದ್ದರು.ಅಂದು ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಚರಣೆಗೆ ಹಿನ್ನಡೆಯಾಗಿತ್ತು.
ಸೋಮವಾರ ಅಗ್ನಿಶಾಮಕ ದಳ ಹಾಗೂ ಲಿಸರು ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ತಂಡ ಮತ್ತು ಮುಳುಗು ತಜ್ಞರ ತಂಡ ಕಾರ್ಯಚರಣೆ ನಡೆಸಿದ್ದು, ಘಟನೆ ನಡೆದ 100 ಮೀಟರ್ ಅಂತರದಲ್ಲಿ ಎರಡು ಸಾಧಿಕಾ ಬಾನು ಹಾಗೂ ಅಪ್ಪು ಎಂಬುವರ ಮೃತದೇಹಗಳು ಪತ್ತೆಯಾಗಿದ್ದು, ಮಂಗಳವಾರ ನಡೆದ ಕಾರ್ಯಚರಣೆಯಲ್ಲಿ ರಾಜು ಮತ್ತು ಪರ್ವಿನ್‍ತಾಜ್ ಮೃತದೇಹಗಳು ಮಂಗಳವಾರ ನಡೆದ ಕಾರ್ಯಚರಣೆಯಲ್ಲಿ ಪತ್ತೆಯಾಯಿತು.
ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್‍ಡಿಆರ್‍ಎಫ್ ಹಾಗೂ ಎಸ್ ಡಿಆರ್‍ಎಫ್ ಹಾಗೂ ಅಗ್ನಿಶಾಮಕದಳ ಮುಳುಗು ತಜ್ಞರು, ಪೊಲೀಸರ ತಂಡಕ್ಕೆ ಜಿಲ್ಲೆಯ ನಾಗಮಂಗಲ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ