ಗ್ರಾಪಂ ಅಧ್ಯಕ್ಷರ ವಿರುದ್ಧ ಸುಳ್ಳು ಆರೋಪ

ಗುಬ್ಬಿ:

ಡಿಎಸ್‍ಎಸ್ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಖಂಡನೆ

         ಪಾರದರ್ಶಕವಾಗಿ ಆಡಳಿತ ನಡೆಸುತ್ತಿರುವ ಸಿಎಸ್‍ಪುರ ಹೋಬಳಿ ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಎಲ್ ರವಿಕುಮಾರ್ ಅವರು ಸಿಬ್ಬಂದಿ ಹಾಗೂ ಎಲ್ಲಾ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆಯನ್ನು ನೀಡುತ್ತಿದ್ದರೂ ಭ್ರಷ್ಟಾಚಾರದ ಆರೋಪವನ್ನು ಹೊರಿಸುವುದು ಸರಿಯಲ್ಲ. ಕೆಲವರು ಉದ್ದೇಶಪೂರ್ವಕವಾಗಿ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಡಿಎಸ್‍ಎಸ್ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಅಂಬೇಡ್ಕರ್ ತತ್ವ ಸಿದ್ದಾಂತಗಳಲ್ಲಿ ನಂಬಿಕೆ ಇಟ್ಟು ಸಾಮಾಜಿಕ ಕಳಕಳಿ ಇಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅವರಿಗೆ ಎಲ್ಲ ಸದಸ್ಯರು ಕೈಜೋಡಿಸಿದರೆ ಮತ್ತಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ. ಆದರೆ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕೆಲವರು ಇಂತಹ ಸುಳ್ಳು ಆರೋಪದಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಕಾರಣಕ್ಕೆ ತೊಂದರೆ 

ಡಿಎಸ್‍ಎಸ್ ತಾಲ್ಲೂಕು ಸಂಚಾಲಕರಾದ ಚೇಳೂರು ಶಿವನಂಜಯ್ಯ ಮಾತನಾಡಿ, ಪಂಚಾಯಿತಿಗೆ ಆದಾಯ ತರುವ ನಿಟ್ಟಿನಲ್ಲಿ ಅಧ್ಯಕ್ಷರು ಎಲ್ಲಾ ಸದಸ್ಯರ ಗಮನಕ್ಕೆ ತಂದು ಅನಗತ್ಯ ಕಟ್ಟಡಗಳನ್ನು ಕೆಡವಿ ಹೊಸ ಅಂಗಡಿ ಮಳಿಗೆಗಳನ್ನು ಕಟ್ಟಲು ಮುಂದಾಗಿರುವುದು ತಪ್ಪೇ ಎಂದ ಅವರು, ಪರಿಶಿಷ್ಟ ಜಾತಿಗೆ ಸೇರಿದವರು ಎನ್ನುವ ಕಾರಣಕ್ಕೆ ಅವರಿಗೆ ತೊಂದರೆ ನೀಡುವುದು ಮುಂದುವರೆದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸುದ್ದಿ ಗೋಷ್ಠಿಯಲ್ಲಿ ಡಿಎಸ್‍ಎಸ್ ಮುಖಂಡರಾದ ನಟರಾಜು, ನರಸೀಯಪ್ಪ, ದೊಡ್ಡಯ್ಯ, ಈಶ್ವರಯ್ಯ, ಶಿವರಂಗಯ್ಯ, ರಾಜಪ್ಪ,ಶಂಕರ್, ಮಹಾದೇವಯ್ಯ, ಲೋಕೇಶ್ ಹಾಗೂ ಇತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link