ಭಾರತ: 24ಗಂಟೆಯಲ್ಲಿ 16,764 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 1,270ಕ್ಕೆ ಏರಿಕ

ನವದೆಹಲಿ:

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 16,764 ದಾಖಲೆ ಪ್ರಮಾಣದ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 220 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,81,080ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಡಿಸೆಂಬರ್ 31) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 8,959 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 91,361ಕ್ಕೆ ತಲುಪಿರುವುದಾಗಿ ವರದಿ ವಿವರಿಸಿದೆ.

ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 7,585 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಒಟ್ಟು 3,42,66,363 ಮಂದಿ ಚೇತರಿಸಿಕೊಂಡಿದ್ದಾರೆ. ಏತನ್ಮಧ್ಯೆ ದೇಶದಲ್ಲಿ ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 450 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್ ನಲ್ಲಿ 97, ರಾಜಸ್ಥಾನದಲ್ಲಿ 69, ತೆಲಂಗಾಣದಲ್ಲಿ 62, ತಮಿಳುನಾಡಿನಲ್ಲಿ 46, ಕರ್ನಾಟಕದಲ್ಲಿ 34 ಪ್ರಕರಣಗಳು ವರದಿಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link