ಗುರುವಾರ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ.?

ಬೆಂಗಳೂರು:

   ರಾಜ್ಯ ರಾಜಧಾನಿ ಬೆಂಗಳೂರು ( Bengaluru ) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಮಹಾಸ್ಪೋಟವೇ ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ ಹೆಚ್ಚಳವಾಗುತ್ತಿದೆ.

            ಇದೇ ಕಾರಣದಿಂದಾಗಿ ನಾಳೆ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ, ಈ ಬಳಿಕ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನಡೆಸಲಿದ್ದಾರೆ.

    ಈ ಸಭೆಗಳಲ್ಲಿ ಬೆಂಗಳೂರು ಸೇರಿದಂತೆ ಕೊರೋನಾ ಹೆಚ್ಚಳದ ಪಾಸಿಟಿವಿಟಿ ದರ ಹೆಚ್ಚಳವಿರುವಂತ ಜಿಲ್ಲೆಗಳಲ್ಲಿ ಲಾಕ್ ಡೌನ್ ( Karnataka Lockdown ) ನಂತರ ಕಠಿಣ ರೂಲ್ಸ್ ಜಾರಿಯ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಕರುನಾಡಿಗೆ ಅಪ್ಪಳಿಸಿದ್ಯಾ ಕೊರೋನಾ 3ನೇ ಅಲೆ ( Covid19 3rd Wave ) ಎನ್ನುವ ಭಯವನ್ನು ಬೆಂಗಳೂರಿನ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆಯಿಂದ ಆತಂಕ ಮೂಡಿದೆ.

ಇದೇ ಕಾರಣಕ್ಕಾಗಿ ನಾಳೆ ತಜ್ಞರ ನೇತೃತ್ವದಲ್ಲಿ ನಡೆಸಲಿರುವಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಮಹತ್ವದ ನಿರ್ಧಾರದ ಕ್ರಮಗಳನ್ನು ಪ್ರಕಟಿಸಲಿದ್ದಾರೆ.

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾಳೆ ತಜ್ಞರ ಜೊತೆಗೆ ಸಭೆಯನ್ನು ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಕೊರೋನಾ, ಒಮಿಕ್ರಾನ್ ನಿಯಂತ್ರಣಕ್ಕೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಬಗ್ಗೆ ಚರ್ಚಿಸಲಾಗುತ್ತದೆ. ತಜ್ಞರು ನೀಡುವಂತ ಸಲಹೆಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

ಇನ್ನೂ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ( Karnataka Cabinet Meeting ) ನಡೆಸಲಾಗುತ್ತದೆ. ಈ ಸಂಪುಟ ಸಭೆಯಲ್ಲಿ ದೀರ್ಘಾವಧಿಯ ಯಾವೆಲ್ಲಾ ಕ್ರಮಗಳನ್ನು ಕೊರೋನಾ ನಿಯಂತ್ರಣಕ್ಕಾಗಿ ತಜ್ಞರ ಸಲಹೆಯ ಮೇರೆಗೆ ಕೈಗೊಳ್ಳಬಹುದು ಎನ್ನುವ ಕುರಿತಂತೆ ಚರ್ಚಿಸಲಾಗುತ್ತದೆ. ಆ ಬಳಿಕ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರದ ಬಗ್ಗೆ ಪ್ರಕಟಿಸಲಾಗುವುದಾಗಿ ತಿಳಿಸಿದರು.

ರಾಜ್ಯದ ಜನರು ಕೊರೋನಾ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು. ಹೆಚ್ಚು ಜನ ಸಂದಣಿಯ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರವನ್ನು ಪಾಲಿಸಬೇಕು. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಸಹಕರಿಸುವಂತೆ ಇದೇ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap