ಬೆಂಗಳೂರು :
ಪಡಿತರ ಚೀಟಿದಾರರಿಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳೆಯುವ ಕುಚಲಕ್ಕಿಯನ್ನು ಪಡಿತರ ಕೇಂದ್ರಗಳಲ್ಲಿ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪಡಿತರದಲ್ಲಿ ವಿತರಿಸಲು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳೆದ ಕುಚಲಕ್ಕಿ ನೀಡಲು ಒಪ್ಪಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು.
ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ ನೀಡುವ ಜೊತೆಗೆ ಫಲಾನುಭವಿಗಳಿಗೆ ಅವರ ಆಯ್ಕೆಯ ಆಹಾರ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ತಿಳಿಸಿದ್ದಾರೆ.
